Invocation
1
—
3
1
ಶ್ರೀ ವಿಷ್ಣು ವಿಶ್ವಾದಿ ಮೂಲ ಮಾಯಾಲೋಲ ।
ದೇವ ಸರ್ವೇಶ ಪರಬೊಮ್ಮನೆಂದು ಜನಂ ॥
ಆವುದನು ಕಾಣದೊಡಮಳ್ತಿಯಿಂ ನಂಬಿಹುದೊ ।
ಆ ವಿಚಿತ್ರಕೆ ನಮಿಸೊ - ಮಂಕುತಿಮ್ಮ ॥ ೧ ॥
ವಿಶ್ವಕ್ಕೆ ಮೂಲವಾದ ಶ್ರೀ ವಿಷ್ಣು, ಮಾಯಾಲೋಲ, ದೇವರು, ಪರಬ್ರಹ್ಮ, ಸರ್ವಕ್ಕೂ ಒಡೆಯನಾದ ಪರಮ ಪುರುಷ ಹೀಗೆ ಹತ್ತು ಹಲವಾರು ಹೆಸರುಗಳಿಂದ ಯಾವುದನ್ನು ಜನರು ಕಾಣದಿದ್ದರೂ ಪ್ರೀತಿ ಮತ್ತು ಭಕ್ತಿಯಿಂದ ನಂಬಿರುವರೋ ಆ ವಿಚಿತ್ರಕ್ಕೆ ನಮಿಸು ಎಂದು ಹೇಳುತ್ತಾರೆ ಶ್ರೀ ಗುಂಡಪ್ಪನವರು.
2
ಜೀವ ಜಡರೂಪ ಪ್ರಪಂಚವನದಾವುದೋ।
ಆವರಿಸಿಕೊಂಡುಮೊಳನೆರೆದುಮಿಹುದಂತೆ॥
ಭಾವಕೊಳಪಡದಂತೆ ಅಳತೆಗಳವಡದಂತೆ।
ಆ ವಿಶೇಷಕೆ ನಮಿಸೊ - ಮಂಕುತಿಮ್ಮ ॥ ೨ ॥
ಈ ಪ್ರಪಂಚದಲ್ಲಿ ಇರುವುದು ಎರಡೇ. ಒಂದು ಜಡ ಮತ್ತು ಮತ್ತೊಂದು ಜೀವ. ಜಡವೆಂದರೆ ಚೇತನವಿಲ್ಲದ್ದು. ಜೀವವೆಂದರೆ ಚೇತನ . ಇವೆರಡರ ಸಮ್ಮಿಲನವೇ ಜಗದ್ವ್ಯಾಪಾರ ಇವೆರಡರಲ್ಲೂ ತುಂಬಿಕೊಂಡಿರುವ, ಭಾವದಿಂದ ಊಹಿಸಲಸಾಧ್ಯವಾದ, ಅಳತೆಗೆ ಸಿಗದ ವ್ಯಾಪಕತ್ವವು ಹೊಂದಿರುವ ಆ ವಿಶೇಷಕೆ (ಪರಮಾತ್ಮನಿಗೆ) ನಮಿಸೋ, ಮಣಿಯೋ, ನಮಸ್ಕರಿಸೋ ಮಂಕುತಿಮ್ಮ ಎಂದು ಹೇಳುತ್ತಾರೆ ಡಿ.ವಿ.ಜಿ.
3
ಇಹುದೊ ಇಲ್ಲವೊ ತಿಳಿಯಗೊಡದೊಂದು ವಸ್ತು ನಿಜ।
ಮಹಿಮೆಯಿಂ ಜಗವಾಗಿ ಜೀವವೇಷದಲಿ ॥
ವಿಹರಿಪುದದೊಳ್ಳಿತೆಂಬುದು ನಿಸದವಾದೊಡಾ ।
ಗಹನ ತತ್ತ್ವಕೆ ಶರಣೊ - ಮಂಕುತಿಮ್ಮ ॥ ೩ ॥